ಕೊರೊನಾ ವೈರಸ್ ಹರಡದಂತೆ ದೇಶದೆಲ್ಲೆಡೆ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಅವಧಿ ಏಪ್ರಿಲ್ ೧೪ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ಲಾಕ್ಡೌನ್ ವಿಸ್ತರಣೆ ಮಾಡಬೇಕೊ ಬೇಡವೊ ಎಂಬುದನ್ನು ನಾಳೆ(ಏಪ್ರಿಲ್ 10) ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲೂ ಭಾರಿ ಚರ್ಚೆ ನಡೆದಿದೆ. ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ನಟ, ನಿರ್ದೇಶಕ ಉಪೇಂದ್ರ ಅವರು ಕೂಡಾ ಟ್ವೀಟ್ ಮಾಡಿ, ಸಿಎಂ ಯಡಿಯೂರಪ್ಪ ಅವರಿಗೆ ಎರಡು ಸಲಹೆ ನೀಡಿದ್ದಾರೆ.
"ಈ ಲಾಕ್ ಡೌನ್ ಸಂದರ್ಭದಲ್ಲಿ ಜನತೆ ಮನೆಯಿಂದ ಹೊರಗೆ ಬರದೆ ಸಹಕರಿಸಬೇಕು. ಉಲ್ಲಂಘಿಸುವವರ ವಿರುದ್ದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಬೆಂಗಳೂರಿನಲ್ಲಿ ಲಾಕ್ಡೌನ್ ಉಲ್ಲಂಘಿಸಿದವರ ಸುಮಾರು ೧೦ ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ” ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ಕೊಟ್ಟರು.
ಈ ನಡುವೆ ಉಪೇಂದ್ರ ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿ... ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ. ಎಂದು ಎರಡು ಸಲಹೆ ನೀಡಿದ್ದಾರೆ.
1. ಶೇಕಡಾ ನೂರಕ್ಕೆ ನೂರು ಲಾಕ್ಡೌನ್
ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆಯಿಂದ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಿ
* ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರೇ ಸೇರುತ್ತಾರೆ.
* ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.
- 2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್ಡೌನ್ ತೆರೆಯಿರಿ
ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು(ಸೋಷಿಯಲ್ ಡಿಸ್ಟೆನ್ಸಿಂಗ್) ಮಾಸ್ಕ್ ಧರಿಸಿ ಅವರವರ ವ್ಯವಹಾರವನ್ನು ಮುಂದುವರಿಸುವುದು.
’ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರೂ (ಹೀಗೆ ನಾಯಕರು ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ.
* ಲಾಕ್ಡೌನ್ ಮಾಡಿಕೊಂಡ ಜನರನ್ನು ಹಾಲು ರೇಷನ್ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯುವುದು ಎಷ್ಟು ಸರಿ?
ಇಷ್ಟೆಲ್ಲ ಲಾಕ್ಡೌನ್ ಮಾಡಿನೇ ನಮ್ ದಡ್ಡ ಜನರು ಹೀಗೆ ಇನ್ನು ಲಾಕ್ಡೌನ್ ತೆಗೆದ್ರೆ ರೋಡ್ ರೋಡಲಿ ಹೆಣಗಳು ಬೀಳುತ್ತೆ ಅಂತ ಹೇಳುವವರಿಗೆ(ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್ಡೌನ್ ಮುಂದುವರಿಸಿದರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ
ಮಲಗಿದ್ರೆ -ಸಾವು|ಕೂತಿದ್ರೆ -ರೋಗ| ನಡಿತಿದ್ರೆ-ಜೀವನ- ನಿಮ್ಮ ಉಪೇಂದ್ರ
]]>